ಅ. 1 ರಂದು ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಮೆಗಾ ರ‍್ಯಾಲಿ

ಉಡುಪಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಮತ್ತು ಜಿಲ್ಲಾ ಸರ್ವೇಕ್ಷಣಾ ಕಚೇರಿ ಉಡುಪಿ ಯ ಸಹಯೋಗದೊಂದಿಗೆ ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನ-2022 ರ ಮೆಗಾ ರ‍್ಯಾಲಿಯನ್ನು ಆಯೋಜಿಸಲಾಗಿದ್ದು ಅಕ್ಟೋಬರ್-1 ಶನಿವಾರದಂದು 8.45 ಕ್ಕೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.