ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮೇಘನಾ ರಾಜ್

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ದಿ. ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಇಂದು (ಅಕ್ಟೋಬರ್ 22) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜೂನ್ ನಲ್ಲಿ ಮೇಘನಾ ಪತಿ, ಸ್ಯಾಂಡಲ್ ವುಡ್ ಸ್ಟ ನಟ ಚಿರಂಜೀವಿ ಸರ್ಜಾ ವಿಧಿವಶರಾಗಿದ್ದರು. ಸಂದರ್ಭದಲ್ಲಿ ಮೇಘನಾ ಗರ್ಭಿಣಿಯಾಗಿದ್ದರು. ಸರ್ಜಾ ನಿಧನದ ನಂತರ ಸಾಮಾಜಿಕ ಜಾಲತಾಣದ ಗರ್ಭಿಣಿಯಾಗಿದ್ದ ವಿಚಾರ ಹಂಚಿಕೊಂಡಿದ್ದು, ಚಿ ಮತ್ತೆ ಹುಟ್ಟಿ ಬರಲಿದ್ದಾರೆ ಎಂದು ತಿಳಿಸಿದ್ದರು.

ಇದೀಗ ಕುಟುಂಬ ಹಾಗೂ ಅಭಿಮಾನಿಗಳ ಅಪೇಕ್ಷೆಯಂತೆ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಕುಟುಂಬದಲ್ಲಿ ಸಂತಸ ತಂದಿದೆ.