ಮಾನಸಿಕ ಅಸ್ವಸ್ಥ ಯುವಕ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ಸಾಲ್ಮರ ಸ್ಪಂದನ ಮಾನಸಿಕ ಅಸ್ವಸ್ಥ ವಸತಿ ಕೇಂದ್ರದಲ್ಲಿ ವಾಸವಿದ್ದ ಶಿವ (21) ಎಂಬ ಯುವಕನು ಬುದ್ಧಿಮಾಂದ್ಯನಾಗಿದ್ದು, ಅಕ್ಟೋಬರ್ 8 ರಂದು ಬೆಳಗ್ಗೆ 11 ಗಂಟೆಯಿಂದ ಸಂಸ್ಥೆಯಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ನಂ. 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಹಾಗೂ ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.