ವಿಧಾನ ಪರಿಷತ್ ಚುನಾವಣೆ: ರಾಜ್ಯಾದ್ಯಂತ ಮೂರು ದಿನ ಮದ್ಯ ಮಾರಾಟ ನಿಷೇಧ

ಬೆಂಗಳೂರು: ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಡಿಸೆಂಬರ್ 8ರ ಸಂಜೆ 4 ಗಂಟೆಯಿಂದ  ಡಿಸೆಂಬರ್ 10 ರ ಮಧ್ಯರಾತ್ರಿವರೆಗೆ 3 ದಿನಗಳ ಕಾಲ ಬಾರ್ ಹಾಗೂ ಮದ್ಯದಂಗಡಿಗಳನ್ನು ಮುಚ್ಚುವಂತೆ ಮುಖ್ಯ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ‌.

ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ರಾಜ್ಯಾದ್ಯಂತ ಮದ್ಯ ಮಾರಾಟಗಾರರು ಖಂಡಿಸಿದ್ದಾರೆ. ಮೂರು ದಿನಗಳ ಕಾಲ ಮದ್ಯ ಮಾರಾಟ ಮಾಡಲು ನಿಷೇಧ ಹೇರಿರುವುದು  ಭಾರೀ ನಷ್ಟವಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.