ಸೆ. 12 ರಂದು ನಂದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಸೆಪ್ಟಂಬರ್ 12 ರಂದು ಬೆಳಗ್ಗೆ 10:30 ಗಂಟೆಗೆ ಸಂರ್ಪರ್ಕ ಜೆರಾಕ್ಸ್ ಹತ್ತಿರ ಬಿ.ಎಸ್.ಲ್ ಇಂಡಿಯಾ ಪ್ರೈ ,ಲಿ, 2ನೇ ಮಹಡಿ ನಂದ ಕಮರ್ಷಿಯಲ್ ಕಾಂಪ್ಲೆಕ್ಸ್ ಕೋರ್ಟ್ ರೋಡ್ ಉಡುಪಿ ಇಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಮತ್ತು ಡಿಪ್ಲೋಮಾ ಬಿ.ಸಿ.ಎ, ಎಮ್.ಸಿ.ಎ, ಬಿ.ಕಾಂ-(ಕಂಪ್ಯೂಟರ್ ಸೈನ್ಸ್)
ಬಿ.ಎಸ್ಸಿ ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಬಿ.ಇ ಇಂಜಿನಿಯರಿಂಗ್ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಾಲ
ಉಡುಪಿ ಅಥವಾ ದೂರವಾಣಿ ಸಂಖ್ಯೆ, 8105618291 ಮತ್ತು 9945856670,8105774936,9901472710 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಉ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.