ಉಡುಪಿ: ಸೆ.8ರಂದು ಯುವ ವಿಕಲಚೇತನರಿಗಾಗಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆ ಇವರ ಸಹಯೋಗದಲ್ಲಿ ಯುವ ವಿಕಲಚೇತನರಿಗೆ ಮಿನಿ ಉದ್ಯೋಗ ಮೇಳವು ಸೆ.8ರಂದು ಬೆಳಗ್ಗೆ 10.30ಕ್ಕೆ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ 18ರಿಂದ 35 ವರ್ಷದೊಳಗಿನ ವಿಕಲಚೇತನ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ. ಮೊ.ನಂ: 8105618291, 9945856670, 8197440155, 9901472710 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.