ಉಡುಪಿ: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ ಮಣಿಪಾಲ, ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಡಾ|| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಿನಿ ಉದ್ಯೋಗ ಮೇಳ ಕಾರ್ಯಕ್ರಮವು ಮಾರ್ಚ್ 29 ರಂದು ಬೆಳಗ್ಗೆ 9.30 ರಿಂದ ಅಜ್ಜರಕಾಡು ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತ್ತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ, ಕನಿಷ್ಠ ಮೂರು ರೆಸ್ಯೂಮ್ (ಬಯೋಡೇಟಾ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಹಾಗೂ ನೋಂದಣಿಗಾಗಿ ಆನ್‌ಲೈನ್ https://udupi.nic.in ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.