ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ ಪ್ರಾಜೆಕ್ಟ್ ಮತ್ತು ವಿಜ್ಞಾನ ಮಾದರಿ ಪ್ರದರ್ಶನ

ಉಡುಪಿ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾದ್ಯಾಲಯದ ಸಹಪಠ್ಯ ಚಟುವಟಿಕೆ ಘಟಕವು ಐಇಇಇ ಮತ್ತು ಇನ್‌ಸ್ಟಿಟ್ಯೂಟ್ ಇನೋವೇಶನ್ ಕೌನ್ಸಿಲ್‌ನ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಟೆಕ್ ಶೋಕೆಸ್ -2026 ಮಿನಿ ಪ್ರಾಜೆಕ್ಟ್ ಪ್ರದರ್ಶನ ಹಾಗೂ ಸ್ಫರ್ಧೆ ಮತ್ತು ಮೂಲ ವಿಜ್ಞಾನ ವಿಭಾಗವು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಆಕೃತಿ ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಮೇ 15ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಸಂಸ್ಥೆಯ ಹಳೆ ವಿದ್ಯಾರ್ಥಿನಿ ನಿಯಸ್ ಸೊಲ್ಯೂಶನ್ ಇದರ ಕ್ಲೌಡ್ ಎಕ್ಸ್‌ಫರ್ಟ್ ಶ್ರೀದೇವಿ ರಾವ್ ಉದ್ಘಾಟಿಸಿದರು ಸಂಸ್ಥೆಯ ಶೈಕ್ಷಣಿಕ ಡೀನ್ ಡಾ.ಸುದರ್ಶನ್ ರಾವ್ ಕೆ. ಅಧ್ಯಕ್ಷತೆ ವಹಿಸಿದ್ದರು. ಈ ಪ್ರದರ್ಶನದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಒಟ್ಟು 81 ವಿಜ್ಞಾನ ಮಾದರಿ ಹಾಗೂ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಒಟ್ಟು 69 ಪ್ರಾಜೆಕ್ಟ್‌ಗಳನ್ನು ಪ್ರದರ್ಶಿಸಿದರು.

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್, ಸಂಸ್ಥೆಯ ಪ್ರಾಂಶುಪಾಲ ಡಾ.ನಾಗರಾಜ್ ಭಟ್, ಡೀನ್‌ಗಳು, ವಿವಿಧ ಭಾಗದ ಮುಖ್ಯಸ್ಥರು ಮತ್ತು ಅಧ್ಯಾಪಕರು ಪ್ರದರ್ಶನ ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಇಜಿಡಿಕೆ ಇಂಡಿಯಾದ ಸೀನಿಯರ್ ಕ್ಯೂ ಎ ಇಂಜಿನಿಯರ್ ಕಾವ್ಯಶ್ರೀ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್ ಐತಾಳ್, ಸಂಸ್ಥೆಯ ಪ್ರಾಂಶುಪಾಲ ಡಾ.ನಾಗರಾಜ್ ಭಟ್ ಉಪಸ್ಥಿತರಿದ್ದರು.

ಪಠ್ಯೇತರ ಚಟುವಟಿಕೆ ಘಟಕದ ಸಂಯೋಜಕಿ ಡಾ.ರೆನಿಟಾ ಶರೋನ್ ಮೋನಿಸ್ ಮತ್ತು ಪ್ರಥಮ ವರ್ಷದ ಇಂಜಿನಿಯರಿಂಗ್ ವಿಭಾಗದ ಸಂಯೋಜಕಿ ಡಾ.ಲೊಲಿಟ ಪ್ರಿಯ ಕ್ಯಾಸ್ಥಲಿನೋ ಕಾರ್ಯಕ್ರಮ ಸಂಯೋಜಿಸಿದ್ದರು.