ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ಅಪಘಾತ

ಬೆಂಗಳೂರು: ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಸಚಿವ ಕೋಟ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ಘಟನೆ ನಡೆದಿದೆ. ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಭಾಗಶಃ ಹಾನಿಯಾಗಿದೆ ಎನ್ನಲಾಗಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.