ವಿಧಾನ ಪರಿಷತ್ತಿನ ಸಭಾನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿಯುಕ್ತಿ

ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ತಿನ ಸಭಾ ನಾಯಕರಾಗಿ ನಿಯುಕ್ತಿಗೊಂಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್ ಸಭಾ ನಾಯಕರಾಗಿ ಕಾರ್ಯನಿರ್ವಹಿಸಲು ನಾಮನಿರ್ದೇಶನ ಮಾಡಿದ್ದಾರೆ.