ಉಡುಪಿ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಎಚ್. ಡಿ. ಕುಮಾರ ಸ್ವಾಮಿ , ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಯವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನಾಡೋಜ ಡಾ. ಜಿ. ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೆ ಗೌಡ, ಉಡುಪಿ ಶಾಸಕರಾದ ಯಶ್ ಪಾಲ ಸುವರ್ಣ, ಆನಂದ ಸುವರ್ಣ, ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಮೊದಲಾದ ಗಣ್ಯರು ಉಪಸ್ಥಿತರಿದ್ದರು.















