ಉಡುಪಿ: ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮಂಗಳವಾರ ಪಶುಸಂಗೋಪನೆ ಸಚಿವ ಪ್ರಭು ಚೌಹಾ ಭೇಟಿ ನೀಡಿ ದೇವರ ದರ್ಶನ ಪಡೆದರು.
ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್ ಅವರು ಸಚಿವರನ್ನು ಬರಮಾಡಿಕೊಂಡರು.
ಪಾಡಿಗಾರು ವಾಸುದೇವ ತಂತ್ರಿ ಅರ್ಚಕ ಗೋವಿಂದ ಐತಾಳ್ ದೇವರ ಪ್ರಸಾದ ನೀಡಿ ಗೌರವಿಸಿದರು. ಅರ್ಚಕ ವರ್ಗದವರು ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.