ಕೋಟ: ಜುಲೈ 8 ರಂದು ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಅಹವಾಲು ಸ್ವೀಕಾರ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ
ಶ್ರೀನಿವಾಸ ಪೂಜಾರಿ ಅವರು ಜುಲೈ 8 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.