ಬೆಂಗಳೂರು: ಬಿಜೆಪಿ ಪ್ರಭಾವಿ ಮುಖಂಡ ಹಾಗೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳೆ ಅವರದ್ದು ಎನ್ನಲಾದ ರಸಲೀಲೆಯ ವೀಡಿಯೋ ಸಿಡಿ ಖಾಸಗಿ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ವಿಡಿಯೋ ಸಿಡಿಯನ್ನು ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಎಂಬವರು ಬೆಂಗಳೂರು ಪೊಲೀಸ್ ವರಿಷ್ಠರಿಗೆ ಹಸ್ತಾಂತರಿಸಿದ್ದಾರೆ. ಈಗಾಗಲೇ ಈ ವೀಡಿಯೋ ಸಾಮಾಜಿಕ ತಾಣದಾದ್ಯಂತ ವೈರಲ್ ಆಗಿದೆ.
ಕೆಲಸ ಕೇಳಿಕೊಂಡು ಬಂದಿದ್ದ ಯುವತಿಯನ್ನು ರಮೇಶ್ ಜಾರಕಿಹೊಳಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಮರ್ಪಕ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಕಮಲ್ ಪಂತ್ ಅವರಿಗೆ ದಿನೇಶ್ ಕಲ್ಲಹಳ್ಳಿ ಸಂತ್ರಸ್ತೆಯ ಪರವಾಗಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.