ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್- ಕಂ- ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿ ವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in/udupi/public ಸಹಾಯವಾಣಿ ಸಂಖ್ಯೆ : 8277799990 ಅಥವಾ ಉಡುಪಿ ದೂ.ಸಂಖ್ಯೆ: 0820- 2574596, ಕಾರ್ಕಳ ದೂ.ಸಂಖ್ಯೆ : 08258- 231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254- 230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.