ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗೀಕರಿಸಿರುವ ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತ, ಕಾರ್ಮಿಕ, ದಲಿತ, ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ಇಂದು ಕರೆಕೊಟ್ಟಿರುವ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕರಾವಳಿ ಮತ್ತು ಹಳೇ ಮೈಸೂರು ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹುಬ್ಬಳ್ಳಿ ಮತ್ತು ಬಾಗಲಕೋಟೆಯಲ್ಲಿ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿಯೇತರ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಎಲ್ಲಾ ಜಿಲ್ಲೆ ಕೇಂದ್ರಗಳಲ್ಲೂ ರೈತ, ಕಾರ್ಮಿಕ, ದಲಿತ, ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ಸೇರಿದಂತೆ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಸಿಪಿಐ(ಎಂ) ಪಕ್ಷಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.