ಕಾರ್ಕಳ :ಕಾರ್ಕಳದ ಪ್ರಸಿದ್ಧ ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಜ. ೫ರಂದು ನಡೆಯಲಿದೆ ಎಂದು ಶಾಸಕ, ಮಿಯ್ಯಾರು ಕಂಬಳ ಸಮಿತಿಯ ಅಧ್ಯಕ್ಷ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಜ.೫ ರ ಬೆಳಿಗ್ಗೆ ೮ ಗಂಟೆಗೆ ಕಂಬಳ ಮಹೋತ್ಸವದ ಉದ್ಘಾಟನೆ ನಡೆಯಲಿದೆ, ಅಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲ, ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯಿಲಿ, ವಿದಾನ ಪರಿಷತ್ ವಿರೋಧ ಪಕ್ಷದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಉಭ ಯ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಗಣ್ಯರು ಉಪಸ್ಥಿತರಿರುವರು ಎಂದರು.
ಈಗಾಗಲೇ ಕಂಬಳಕ್ಕೆ ಬೇಕಾದ ಪೂರ್ವಸಿದ್ದತೆಗಳು ನಡೆಯುತ್ತಿದೆ. ೧೫೦ಕ್ಕೂ ಅಧಿಕ ಜತೆ ಕೋಣಗಳು ಭಾಗವಹಿಸಲಿವೆ. ಜ. ೬ರಂದು ಪೂರ್ವಾಹ್ನ ಬಹುಮಾನ ವಿತರಣೆ ನಡೆಯಲಿದೆ ಎಂದರು.
ಗೋಷ್ಠಿಯಲ್ಲಿ ಕಂಬಳ ಸಮಿತಿಯ ಕೋಶಾಧ್ಯ ಕ್ಷ ಜೀವನ್ದಾಸ್ ಅಡ್ಯಂತಾಯ, ಸಂಘಟನಾ ಕಾರ್ಯದರ್ಶಿ ಪ್ರೊ| ಕೆ. ಗುಣಾಪಾಲ ಕಡಂಬ, ಭಾಸ್ಕರ ಎಸ್. ಕೋಟ್ಯಾನ್, ಸುರೇಶ್ ಕೆ. ಪೂಜಾರಿ, ಉದಯ ಎಸ್. ಕೋಟ್ಯಾನ್, ವಿಜಯ ಕುಮಾರ್ ಕಂಗಿನಮನೆ ಉಪಸ್ಥಿತರಿದ್ದರು.