ಮಣಿಪಾಲ: 80 ಬಡಗಬೆಟ್ಟು- ಅಲೆವೂರು ಮುಖ್ಯರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಮಣಿಪಾಲ: ಮಣಿಪಾಲ- 80 ಬಡಗಬೆಟ್ಟು- ಅಲೆವೂರು ಮುಖ್ಯರಸ್ತೆಯು ಸುಮಾರು 8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಳ್ಳುತ್ತಿದ್ದು ಗುರುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ಉಪಾಧ್ಯಕ್ಷೆ ರೂಪಾ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಹಾಗೂ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಗಿರೀಶ್ ಮತ್ತು ಅಲೆವೂರು ಗ್ರಾಮ ಪಂಚಾಯತ್ ಸದಸ್ಯರು, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು