ಉಡುಪಿ: ಶುಕ್ರವಾರದಂದು ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ನಗರಸಭೆಯ ಸ್ವಚ್ಛತೆಯ ನೈಜ ರಾಯಭಾರಿಗಳಾದ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ತಮ್ಮ ಜನ್ಮದಿನಾಚರಣೆ ಆಚರಿಸಿ ಅವರೊಂದಿಗೆ ಭೋಜನ ಸವಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ ಮತ್ತು ನಗರ ಸಭೆಯ ಸದಸ್ಯರು, ನಗರ ಸಭೆಯ ಪರಿಸರ ಇಲಾಖೆಯ ಸ್ನೇಹಾ ಹಾಗೂ ಶಾಸಕರ ಧರ್ಮಪತ್ನಿ ಶಿಲ್ಪಾ ಆರ್ ಭಟ್, ಮಗನಾದ ರೋಹನ್, ರೆಯ್ಯಾನ್ಶ್ ಜೊತೆಗಿದ್ದರು.