ಶ್ರೀ ಕೃಷ್ಣ , ಗೋಮಾತೆ ಹಾಗೂ ವಿಬುಧೇಶ ತೀರ್ಥ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಶಾಸಕನಾಗಿ ಚುನಾಯಿತರಾಗಿರುವ ಯಶ್ ಪಾಲ್ ಸುವರ್ಣ ಅವರು ಉಡುಪಿಯ ಶ್ರೀಕೃಷ್ಣ ಪರಮಾತ್ಮ, ಗೋಮಾತೆ ಮತ್ತು ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ ವಿಬುಧೇಶ ತೀರ್ಥ ಸ್ವಾಮಿಜಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

https://twitter.com/i/status/1660910788960456704

“ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ನನ್ನ ಆರಾಧ್ಯ ದೈವ ಪೊಡವಿಗೊಡೆಯ ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರು, ಗೋ ಮಾತೆ ಹಾಗೂ ನಾನು ಕಲಿತ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ, ಅದಮಾರು ಮಠದ ಕೃಷ್ಣೈಕ್ಯ ಶ್ರೀ ಶ್ರೀ ಶ್ರೀ ವಿಬುಧೇಶ ತೀರ್ಥ ಸ್ವಾಮೀಜಿ ಯವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇನೆ”.