ಕೊರಗ ಸಮುದಾಯದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಯಶ್ ಪಾಲ್ ಸುವರ್ಣ

ಬ್ರಹ್ಮಾವರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ, ಇದರ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಕೊರಗ ಸಮುದಾಯದ ಅಭಿವೃದ್ಧಿ, ಸಮಸ್ಯೆಗಳು ಹಾಗೂ ಪರಿಹಾರ ಉಪಾಯಗಳ ಬಗ್ಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆಯನ್ನು ಶಾಸಕ ಯಶ್ ಪಾಲ್ ಸುವರ್ಣ ವಹಿಸಿ, ಕೊರಗ ಸಮುದಾಯದ ಅಭಿವೃದ್ಧಿ ಹಾಗೂ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸಲು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಗಿರಿಜನ ಸಮಗ್ರ ಅಭಿವೃಧ್ದಿ ಇಲಾಖೆಯ ಯೋಜನಾಧಿಕಾರಿ ದೂದ್ ಪೀರ್, ಉಪ ತಹಶೀಲ್ದಾರ್ ರಾಘವೇಂದ್ರ ನಾಯಕ್, ತಾಲೂಕು ಯೋಜನಾಧಿಕಾರಿ ಸಂದೇಶ್ ಶೆಟ್ಟಿ ಹಾಗೂ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟದ ಪ್ರಮುಖರು ವಿವಿಧ ಗ್ರಾಮ ಪಂಚಾಯತ್ ಅಧಿಕಾರಿಗಳು ಉಪಸ್ಥಿತರಿದ್ದರು.