ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗಾಗಿ ಸಂಚಾರಿ ಕ್ಲಿನಿಕ್ ಉದ್ಘಾಟನೆ

ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಗೆ ಶುಕ್ರವಾರ ನಗರಸಭೆಯ ಆವರಣದಲ್ಲಿ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಶ್ಮೀ ಮಂಜುನಾಥ್, ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಈ ಸಂಚಾರಿ ವಾಹನವು ನವೆಂಬರ್ 19 ರ ವರೆಗೆ ನಗರದ ವಿವಿಧ ವಾರ್ಡ್ ಗಳಲ್ಲಿ ಸಂಚರಿಸಲಿದೆ.