ಉಡುಪಿ: ಚರ್ಮಗಂಟು ರೋಗವು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಜಾನುವಾರುಗಳಿಗೆ ಹರಡುವ ಖಾಯಿಲೆಯಾಗಿದ್ದು, ರೋಗಗ್ರಸ್ತ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುವುದರಿಂದ ಹಾಗೂ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ತಡೆಗಟ್ಟುವ ಸಲುವಾಗಿ, ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಿಲ್ಲೆಯ ಒಳಗೆ ಮತ್ತು ಹೊರಗೆ ಜಾನುವಾರುಗಳಾದ ದನ ಮತ್ತು ಎಮ್ಮೆಯ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಹೈನುಗಾರರು ಹಾಗೂ ರೈತರು ಜಾನುವಾರು ಸಾಗಾಟ ಮಾಡದಂತೆ ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.