ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಉಡುಪಿ ಜಿಲ್ಲೆ. ಇದರಿಂದ FSSAI ಪರವಾನಿಗೆ ಕುರಿತು ಮಾಹಿತಿ ಕಾರ್ಯಗಾರ.

ಬ್ರಹ್ಮಾವರ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಫೆ. 21 ರಂದು ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ತಿಂಗಳ ಸಾಮಾನ್ಯ ಸಭೆಯಲ್ಲಿ FSSAI ಪರವಾನಿಗೆ ಮಾಹಿತಿ ಶಿಬಿರ ಕಾರ್ಯಕ್ರಮವನ್ನು ಅಂಕಿತಾಧಿಕಾರಿಗಳಾದ ಡಿ. ಪ್ರೇಮಾನಂದ ಕೆ ಉದ್ಘಾಟಿಸಿ
FSSAI ಪರವಾನಿಗೆ ಬಗ್ಗೆ ಸಂಘದ ಸದಸ್ಯರಿಗೆ ಮಾಹಿತಿ ನೀಡಿ ಕಾನೂನುಗಳನ್ನು ಪಾಲಿಸಿ ಆಹಾರ ತಯಾರಿಕೆಯಲ್ಲಿ ಸ್ವಚ್ಛತೆಯ ಬಗ್ಗೆ ಸಂಪೂರ್ಣ ಅರಿವು ನೀಡಿದರು.

ಆಹಾರ ಇಲಾಖೆಯ ಸೇವೆಯಿಂದ ಇತ್ತೀಚಿಗಷ್ಟೇ ನಿವೃತ್ತರಾದ ವೆಂಕಟೇಶ್ ಅವರ ಸನ್ಮಾನ ಕಾರ್ಯಕ್ರಮವು ಸಂಘದ ಅಧ್ಯಕ್ಷ ವಿಶ್ವನಾಥ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಆಹಾರೋದ್ಯಮಿಗಳು ಪಾಲ್ಗೊಂಡಿದ್ದರು.

ಇಲಾಖೆಯ ಹಿರಿಯ ಅಧಿಕಾರಿ ನಿವೃತ್ತ ವೆಂಕಟೇಶ್ ಸಂಘದ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಣೈ ಸ್ವಾಗತಿಸಿದರು, ಸಂಘದ ಸಂಘಟನಾ ಕಾರ್ಯದರ್ಶಿ ದಿವಾಕರ್ ಸನಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನವೀನ್ ಶೆಟ್ಟಿ ನಿರೂಪಿಸಿ ವಂದಿಸಿದರು