ಮೂಡುಬಿದಿರೆ:ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಪ್ರಥಮ

ಮೂಡುಬಿದಿರೆ: ಫೆಬ್ರವರಿ 7 ಮತ್ತು 8 ರಂದು ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಬಿ ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ ಮತ್ತು ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸ್ನೇಹ ಪರಪ್ಪ ಸಮಾಯಿ ಕನ್ನಡ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಅಭಿನಂದಿಸಿದ್ದಾರೆ.