ಮೂಡುಬಿದಿರೆ: ಕಾರಿ ಡಿಕ್ಕಿ – 7ನೇ ತರಗತಿ ವಿದ್ಯಾರ್ಥಿ ಮೃತ್ಯು.

ಮೂಡುಬಿದಿರೆ : ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಬಾಲಕ ಮೃತಪಟ್ಟಿರುವ ಘಟನೆ ಮಾರೂರು ಹೊಸಂಗಡಿ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.

ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.

ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಇಂದು ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.