ಮೂಡುಬಿದಿರೆ: ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; ವೃದ್ಧನ ಬಂಧನ

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಳುವಾಯಿಯ 60 ವರ್ಷದ ರೆಹಮಾನ್ ಎಂಬ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಆರಂಭದಲ್ಲಿ ಯಾವುದೇ ದೂರು ದಾಖಲಾಗದ ಕಾರಣ, ಪೊಲೀಸರು ರೆಹಮಾನ್ ಅವರನ್ನು ವಿಚಾರಣೆಗೆ ಠಾಣೆಗೆ ಕರೆಸಿ ಬಿಡುಗಡೆ ಮಾಡಿದ್ದರು.

ಆದರೆ ಈ ಕ್ರಮದಿಂದ ಮೂಡುಬಿದಿರೆಯ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಅವರು ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ ಜಿ ಅವರಿಗೆ ದೂರು ಸಲ್ಲಿಸಿದರು.