ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2022- 23 ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕಾಗಿ, ಪ್ರಸ್ತುತ 5 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ, ಪ.ವರ್ಗ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್. ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಪ್ರವೇಶ ನೀಡಲಾಗುತ್ತದೆ. ಪ್ರವೇಶ ಪರೀಕ್ಷೆ ನಡೆಸಿ, ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆ ಮತ್ತು ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಜಿಲ್ಲಾ ಸಮನ್ವಯಾಧಿಕಾರಿ ಹಾಗೂ ಉಡುಪಿ ತಾಲೂಕು ಪಟ್ಲಾ ಹೀರೆಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9480586729, ಕುಂದಾಪುರ ತಾಲೂಕು ಯಡ್ಯಾಡಿ-ಮತ್ಯಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 8453776902, ಬ್ರಹ್ಮಾವರದ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9482487266, ಹೆರಂಜಾಲು ಕಂಬದಕೋಣೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 8073860074, ಕಾಪು ತಾಲೂಕು ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 7022713447, ಶಂಕರನಾರಾಯಣ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಮೊ.ನಂ: 7406882275, ಸಿದ್ಧಾಪುರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಮೊ.ನಂ: 9880460998 ಹಾಗೂ ಕಾರ್ಕಳ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9449489154 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.