ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ 7,8,9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು ಅಗತ್ಯ ದಾಖಲೆಗಳೊಂದಿಗೆ ಜೂನ್ 10 ರೊಳಗೆ ವಸತಿ ಶಾಲೆಗಳ ಕಚೇರಿಗೆ ಸಲ್ಲಿಸಬಹುದಾಗಿದೆ.
ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ:8277894199, 8970298710 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

















