ಚಲಿಸುತ್ತಿದ್ದ ಬಸ್ಸಿನಡಿ ಸಿಲುಕಿ ತಾಯಿ-ಮಗು ಮೃತ್ಯು

ಉಪ್ಪಿನಂಗಡಿ: ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ -ಮಗು ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿ ಮಂಗಳವಾರ ನಡೆದಿದೆ

ಮೃತರನ್ನು ಬೆಳ್ತಂಗಡಿ ತಾಲ್ಲೂಕು ಸಾಹಿದ (25) ಮತ್ತು ಅವರ ಪುತ್ರ ಸಾಹಿಲ್(1) ಎಂದು ಗುರುತಿಸಲಾಗಿದೆ. ತಾಯಿ-ಮಗು ರಸ್ತೆ ದಾಟುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ಇವರ ಮೇಲೆ ಹರಿದಿದೆ ಎನ್ನಲಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.