ಶಂಕರನಾರಾಯಣದ ಮದರ್ ತೆರೇಸಾ ಪ. ಪೂ.ಕಾಲೇಜು, ಶೇ.100 ಫಲಿಶಾಂಶ: 92 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪುರ: ಶಂಕರನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಈ ವರ್ಷದ ಪದವಿ ಪೂರ್ವ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ.

ಒಟ್ಟು 175 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 92 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸಂಜನಾ 595 ಅಂಕಗಳನ್ನು ಪಡೆದು ಶೇ.99.16 ಫಲಿತಾಂಶದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಅಮೂಲ್ಯ 595 ಅಂಕಗಳನ್ನು ಗಳಿಸಿ ಶೇ.99.16 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಅಭಿನಂದನೆ ವಿದ್ಯಾರ್ಥಿಗಳಿಗೆ ಸಲ್ಲಿಸಿದ್ದಾರೆ.