ಉಡುಪಿ: ಶ್ರೀಕೃಷ್ಣಮಠಕ್ಕೆ ಬಿ.ಜೆ.ಪಿ ರಾಷ್ಟೀಯ ಯುವ ಮೋರ್ಚಾ ಅಧ್ಯಕ್ಷ ,ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಠದ ಅಧಿಕಾರಿಗಳಾದ ವಾದಿರಾಜ್, ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.