ಅ. 23ಕ್ಕೆ ಬಿಲ್ಲಾಡಿ ಆತ್ಮಾನಂದ ಸರಸ್ವತಿ ಐಟಿಐ ಕಾಲೇಜಿನಲ್ಲಿ ಎಂಆರ್‌ಎಸಿ ವೃತ್ತಿ ಘಟಕ ಉದ್ಘಾಟನೆ

ಉಡುಪಿ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಎಜ್ಯುಕೇಶನಲ್ ಟ್ರಸ್ಟ್‌ ವತಿಯಿಂದ ನಡೆಸಲ್ಪಡುವ ಬಿಲ್ಲಾಡಿ ಆತ್ಮಾನಂದ ಸರಸ್ವತಿ ಐಟಿಐ ಕಾಲೇಜಿನ ಎಂಆರ್‌ಎಸಿ ವೃತ್ತಿ ಘಟಕದ ಉದ್ಘಾಟನಾ ಸಮಾರಂಭ ಅ. 23ರಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ.

ಧರ್ಮಸ್ಥಳ ಕನ್ಯಾಡಿ ಶ್ರೀ ರಾಮಕ್ಷೇತ್ರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಇಂಧನ ಮತ್ತು ಕನ್ನಡ- ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ. ಜಿ. ಶಂಕರ್, ಶಾಸಕ ಕೆ. ರಘುಪತಿ ಭಟ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಂದಾರ್ತಿ ಕ್ಷೇತ್ರದ ಮೊಕ್ತೇಸರ ಧನಂಜಯ ಶೆಟ್ಟಿ, ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.