ಮಿಸೆಸ್ ಯೂನಿವರ್ಸಲ್‌ ಗೆ ಉಡುಪಿಯ ಡಾ.ಪದ್ಮಾ ಗಡಿಯಾರ್ ಆಯ್ಕೆ

ಉಡುಪಿ : ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆದ ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಮಹಿಳೆಯೊಬ್ಬರು ಮಿಸೆಸ್ ಯೂನಿವರ್ಸಲ್‌ಗೆ ಪ್ರವೇಶ ಪಡೆದು ಗಮನ ಸೆಳೆದಿದ್ದಾರೆ.

ಉಡುಪಿ ತೆಂಕಪೇಟೆಯ ಅರುಣ್ ಶೆಣೈ-ಅರ್ಚನಾ ಶೆಣೈ ದಂಪತಿ ಪುತ್ರಿ ಡಾ.ಪದ್ಮಾ ಗಡಿಯಾರ್ ಬ್ರಿಸ್ಬೇನ್‌ನಲ್ಲಿ 2018 ಅಕ್ಟೋಬರ್ ತಿಂಗಳಲ್ಲಿ ಯು.ಎಸ್. ಮೂಲದ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮಿಸಸ್ ಸೌತ್ ಇಂಡಿಯಾ ಯೂನಿವರ್ಸಲ್ ಕಿರೀಟ ಗೆದ್ದಿದ್ದರು.ಇದೀಗ ಇದೇ ಬರುವ ಆಗಸ್ಟ್‌ನಲ್ಲಿ ಮೆಕ್ಸಿಕೊದಲ್ಲಿ ಮಿಸೆಸ್ ಯೂನಿವರ್ಸಲ್ ಸ್ಪರ್ಧೆ ನಡೆಯಲಿದ್ದು, ಕಿರಿಟ ಮುಡಿಗೇರಿಸಿಕೊಳ್ಳುವ ನಿರೀಕ್ಷೆ ಹುಟ್ಟಿಸಿದ್ದಾರೆ.

ಇಂದ್ರಾಳಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಎಂಜಿಎಂ ಕಾಲೇಜಿನಲ್ಲಿ ಪಿಯುಸಿ, ದಂತ ವೈದ್ಯಕೀಯ ಶಿಕ್ಷಣವನ್ನು ಮಂಗಳೂರಿನ ಯೇನೆಪೋಯ ವಿಶ್ವವಿದ್ಯಾಲಯದಲ್ಲಿ ಪಡೆದಿರುವ ಡಾ.ಪದ್ಮಾ ದಂತ ವೈದ್ಯೆಯಾಗಿದ್ದು, ಪತಿ ಡಾ.ಸನಯ್ ಗಡಿಯಾರ್ ಕೂಡ ವೈದ್ಯರು. ಪುತ್ರಿ ಸಮಾ, ಪುತ್ರ ಶಯನ್ ಜತೆ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ.

ವೈದ್ಯರಾಗಿ ಕರ್ತವ್ಯ ನಿರ್ವಹಣೆ
ವೈದ್ಯರಾಗಿ ಕರ್ತವ್ಯ ನಿರ್ವಹಣೆ ಕಳೆದ 11ವರ್ಷದಿಂದ ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪದ್ಮ ಗಡಿಯಾರ್, ಬಾಲ್ಯದಲ್ಲಿ ಕಂಡ ಕನಸನ್ನು ನನಸಾಗಿಸಿಕೊಳ್ಳುತ್ತಿದ್ದಾರೆ. “ಸಾಧನೆಗೆ ವಯಸ್ಸು ಎಂದಿಗೂ ಅಡ್ಡಿ ಆಗಬಾರದು. ಮನಸ್ಸಲ್ಲಿ ದೃಢ ನಿರ್ಧಾರ ಇರಬೇಕಷ್ಟೆ ಎನ್ನುತ್ತಾರೆ ಪದ್ಮಾ.