ಮೂಡಬಿದಿರೆ: ಆಳ್ವಾಸ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 8ನೇ ಸೆಮಿಸ್ಟರ್‌ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಬಿದಿರೆ ಮಿಜಾರ್‌ನ ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಸಿಎಸ್‌ಇ. ವಿಭಾಗದಲ್ಲಿ ಶೇ. 99 ಫಲಿತಾಂಶ ದಾಖಲಾಗಿದ್ದು, 90ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಜಸ್ಮಿನೆ ಪ್ರಿನ್ಸಿಲೋಬೊ ಶೇ.88.71 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಐಎಸ್‌ಸಿ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. 29 ಮಂದಿ ವಿಶಿಷ್ಟ ಶ್ರೇಣಿ ಗಳಿಸಿದ್ದು, ಹರ್ಷಿತಾ (ಶೇ.88.57 ಅಂಕ) ತರಗತಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇ ಆ್ಯಂಡ್‌ಸಿ ಇ ವಿಭಾಗದಲ್ಲಿ ಶೇ.100 ಫಲಿತಾಂಶ ಬಂದಿದ್ದು, 87 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಿಯಾ ಸುರೇಶ್‌ ನಾೃಕ್‌ (ಶೇ.90.43 ಅಂಕ) ಪ್ರಥಮ ಸ್ಥಾನ‌ಪಡೆದಿದ್ದಾರೆ.
ಸಿವಿಎಲ್ ವಿಭಾಗದಲ್ಲಿ 98ಪ್ರತಿಶತ ಫಲಿತಾಂಶದೊಂದಿಗೆ 101 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮಂಜುಳಾ ಪರಪ್ಪ (ಶೇ.89.29) ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಮೆಕ್ಯಾನಿಕಲ್ ಇಂಜಿನಿಯರಿಂಗ್‌ ವಿಭಾಗದಲ್ಲಿ ಶೇ. 98 ಫಲಿತಾಂಶ ದಾಖಲಾಗಿದ್ದು, 130 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಪಡೆದಿದ್ದಾರೆ. ಅನಂದ್‌ ಹಿ ವಾರಿಯರ್‌ ( ಶೇ. 90.57) ಪ್ರಥಮ ಸ್ಥಾನ ಗಳಿಸಿದ್ದಾರೆ.