ಕರಾಟೆ ಸ್ಪರ್ಧೆ: ಮುಕುಂದಕೃಪಾ ವಿದ್ಯಾರ್ಥಿನಿ ಅಚಲಾ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣ ಇಲಾಖೆಗಳ ಸಹಕಾರದಲ್ಲಿ ನಡೆದ 30-40 ಕೆ. ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿ.ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಅಚಲಾ.ಬಿ. ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಲಾ ಮುಖ್ಯೋಪಾದ್ಯಾಯಿನಿ ಶ್ರೀಮತಿ ಸುಜಾತಾ ಶಾಂತಾರಾಮ್ ಶೆಟ್ಟಿ ಹಾಗೂ ಸೀತಾರಾಮ ಪೂಜಾರಿ ಉಪಸ್ಥಿತರಿದ್ದರು.

ಈಕೆ ಗುರುಗಳಾದ ಸೀತಾರಾಮ ಪೂಜಾರಿ ಇವರಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದಾಳೆ. ಪಲಿಮಾರು ಹಿರಿಯ ಶ್ರೀಪಾದರ ಶಿಷ್ಯರಾದ ಶ್ರೀ ಸುಬ್ರಹ್ಮಣ್ಯ ಭಟ್ ಹಾಗೂ ಶ್ರೀಮತಿ ರಕ್ಷಾ ದಂಪತಿಗಳ ಸುಪುತ್ರಿಯಾಗಿದ್ದಾಳೆ.