ಮುಲ್ಕಿ: ಇಂದಿರಾನಗರ ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ.!

ಉಡುಪಿ: ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಸಂಭವಿಸಿದೆ.

ಕಾರ್ಕಳ ಬೈಲೂರಿನ ನಿವಾಸಿ 55 ವರ್ಷದ ಪ್ರಭಾಕರ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಮೂಲ್ಕಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಜೀವ ರಕ್ಷಕ ತಂಡದ ದಾವೂದ್, ಪ್ರಸಾದ್ ಹಾಗೂ ಮಹೇಶ್ ತಕ್ಷಣ ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಜೀವ ರಕ್ಷಕ ಆಂಬುಲೆನ್ಸ್ ಮೂಲಕ ಮೂಲ್ಕಿ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.