ಮಲ್ಪೆ: ಸಂಪೂರ್ಣ ಕೊಳೆತು ಹೋದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

ಮಲ್ಪೆ: ಕೆಮ್ಮಣ್ಣು ಯಡಬೆಟ್ಟು ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಇರುವ ವ್ಯಕ್ತಿಯೊರ್ವರ ಶವ ಇಂದು ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಶೇಖರ ಪೂಜಾರಿ (55) ಎಂದು ಗುರುತಿಸಲಾಗಿದೆ. ಇವರು ಮುಂಬೈನಲ್ಲಿ ಹೋಟೆಲ್ ಉದ್ಯೋಗದಲ್ಲಿದ್ದು, ಲಾಕ್ ಡೌನ್ ಸಮಯದಲ್ಲಿ ಕೆಲಸ ಕಳೆದುಕೊಂಡು ಊರಿಗೆ ಬಂದಿದ್ದರು. ಕೂಲಿ ಕೆಲಸ ಮಾಡಿಕೊಂಡು ಒಂಟಿಯಾಗಿ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಕುಡಿತದ ಚಟವು ಇತ್ತು ಎನ್ನಲಾಗಿದೆ.

ಉಡುಪಿಯಲ್ಲಿ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದ ಬಹಳಷ್ಟು ಮನೆಗಳು ನೆರೆಗೆ ತುತ್ತಾಗಿದ್ದವು. ಮನೆ ಹಾನಿಯ ಪರಿಶೀಲಿಸಲು ಹೋದಂತಹ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಮಲ್ಪೆ ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್ ಹಾಗೂ ಕಾನ್ ಸ್ಟೇಬಲ್ ಗಳಾದ ರಾಘವೇಂದ್ರ ಬಿ.ಕೆ, ಜಗದೀಶ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಸಮಾಜಸೇವಕ ನಿತ್ಯಾನಂದ ಒಳಕಾಡು ಮೃತದೇಹವನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು, ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ನೀಡಿ ಸಹಕರಿಸಿದರು.