ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ನಗರಸಭೆಯ ಘನತ್ಯಾಜ್ಯ ನಿರ್ವಹಣೆಗೆ ಫ್ರಂಟ್ ಆಂಡ್ ಬ್ಯಾಕ್ ಲೋಡರ್ ವಾಹನ ಹಾಗೂ ನಾಲ್ಕು ಟಿಪ್ಪರ್ ಮಂಜೂರಾಗಿದ್ದು, ಶಾಸಕ ಕೆ ರಘುಪತಿ ಭಟ್ ನಗರಸಭೆಯ ಮುಂಭಾಗದಲ್ಲಿ ವಾಹನಗಳಿಗೆ ಚಾಲನೆ ನೀಡಿದರು.
ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷ ಲಕ್ಷ್ಮೀ ಮಂಜುನಾಥ ಕೊಳ, ನಗರಸನ್ಹೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತ ಉದಯ್ ಶೆಟ್ಟಿ, ನಗರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.