ಉಡುಪಿ: ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಐವರು ಆರೋಪಿಗಳಿಗೆ ಉಡುಪಿ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಆರೋಪಿಗಳಾದ ಮನೋಜ್ ಕೋಡಿಕೆರೆ, ಚಿತ್ತರಂಜನ್ ಪೂಜಾರಿ, ಚೇತು ಪಡೀಲ್, ರಮೇಶ್ ಪೂಜಾರಿ, ದೀಕ್ಷಿತ್ ಶೆಟ್ಟಿ ಎಂಬವರನ್ನು ವಿಡಿಯೋ ಕಾನ್ಫೆ ರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗಳನ್ನು ಅ.1ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು ಎಂದು ತಿಳಿದುಬಂದಿದೆ.
ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಬಗ್ಗೆ ಮಾಹಿತಿ ಕಳೆಹಾಕಲಾಗುತ್ತಿದ್ದಾರೆ ಎನ್ನಲಾಗಿದೆ.