ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘ ಕ್ಕೆ ಸಾಧನ ಪ್ರಶಸ್ತಿಯ ಗೌರವ

ಮಂಗಳೂರು:ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ವಾರ್ಷಿಕ ಮಹಾಸಭೆಯ ಕಾರ್ಯಕ್ರಮದಲ್ಲಿ ಸಾಧನಾ ಪ್ರಶಸ್ತಿ 2022-23ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಪೂಜಾರಿ ಕುಕ್ಕುಡೆ., ನಿರ್ದೇಶಕ ಅಚ್ಚುತ ಕೋಟ್ಯಾನ್ ಹೇರೂರು , ಸತೀಶ್ ಪೂಜಾರಿ ಉಗ್ಗೇಲ್ ಬೆಟ್ಟು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಎನ್ ಕರ್ಕೇರಾ ಉಪಸ್ಥಿತರಿದ್ದು ಪ್ರಶಸ್ತಿ ಸ್ವೀಕರಿಸದರು.

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಮ್. ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.