ಕುಂದಾಪುರ: ‘ಮೂರು ಮುತ್ತು’ ಖ್ಯಾತಿಯ ಅಶೋಕ್ ಶಾನಭಾಗ್ ಇನ್ನಿಲ್ಲ

ಕುಂದಾಪುರ: ರೂಪಕಲಾ ನಾಟಕ ತಂಡದ ‘ಮೂರು ಮುತ್ತು’ ಖ್ಯಾತಿಯ ಅಶೋಕ್ ಶಾನಭಾಗ್ ಅವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಲ್ಲಿ ಮಿಂಚಿ ಮನರಂಜಿಸಿದ್ದರು. ಇವರ ಅಗಲಿಕೆಯ ಸುದ್ದಿ ಇವರ ಅಪಾರ ಅಭಿಮಾನಿಗಳಿಗೆ ದುಃಖ ಉಂಟುಮಾಡಿದೆ.

ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇಂತಹ ಹಲವಾರು ನಾಟಕಗಳಲ್ಲಿ ನಟಿಸಿದ್ದ ಅಶೋಕ್ ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ಇಂದು ಕುಂದಾಪುರದಲ್ಲಿ ನಡೆಯಲಿದೆ.