Homeರಾಜ್ಯ ಸುದ್ದಿನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಆಚರಣೆ: ಎಸ್ ಎಂ ಕೃಷ್ಣ, ನಾರಾಯಣ ಮೂರ್ತಿ...

ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಆಚರಣೆ: ಎಸ್ ಎಂ ಕೃಷ್ಣ, ನಾರಾಯಣ ಮೂರ್ತಿ ಮತ್ತು ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ

ಬೆಂಗಳೂರು: ಸೋಮವಾರದಂದು ಮುಖ್ಯಮಂತ್ರಿ ಬಿ.ಎಸ್ ಬೊಮ್ಮಾಯಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮೊದಲ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿಯು ರೂ 5 ಲಕ್ಷ ನಗದು ಬಹುಮಾನವನ್ನು ಹೊಂದಿದೆ.

ಸಮಾರಂಭದಲ್ಲಿ ಡಾ. ನಿರ್ಮಲಾನಂದ ಮಹಾಸ್ವಾಮಿಗಳು, ನಂಜಾವಧೂತ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಸಚಿವರಾದ ಆರ್ ಅಶೋಕ್, ಗೋಪಾಲಯ್ಯ ಕೆ, ಸುನಿಲ್ ಕುಮಾರ್ ಕಾರ್ಕಳ, ಮುರುಗೇಶ್ ನಿರಾಣಿ, ಸಂಸದ ತೇಜಸ್ವಿ ಸೂರ್ಯ ಮತ್ತು ಇತರರು ಉಪಸ್ಥಿತರಿದ್ದರು.

ಚಿತ್ರ ಕೃಪೆ: ಸಿಎಂ ಆಫ್ ಕರ್ನಾಟಕ/ಟ್ವಿಟರ್

error: Content is protected !!