ದೊಡ್ಡಣ್ಣಗುಡ್ಡೆ: ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಮೇ.3 ರಿಂದ 6 ರವರೆಗೆ ನವೀಕೃತ ನಾಗಾಲಯದಲ್ಲಿ ಸಪರಿವಾರ ನಾಗದೇವರ ಪುನರ್ ಪ್ರತಿಷ್ಠೆ ಶ್ರೀ ಕಾಲಭೈರವ ಬಿಂಬ ಪ್ರತಿಷ್ಠಾಪನೆ ಹಾಗೂ ದುರ್ಗಾ ಆದಿಶಕ್ತಿ ದೇವಿಗೆ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕ, ರಂಗ ಪೂಜಾ ಮಹೋತ್ಸವ, ಬಲಿ ಉತ್ಸವ, ಮಹಾಚಂಡಿಕಾಯಾಗ, ನಿರಂತರ ಮಹಾ ಅನ್ನಸಂತರ್ಪಣೆಯು ಜರುಗಲಿದ್ದು ಭಕ್ತಾದಿಗಳು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ದೇವತಾ ಕೃಪೆಗೆ ಪಾತ್ರರಾಗಬೇಕಾಗಿ ದೇವಳದ ಧರ್ಮದರ್ಶಿಗಳಾದ ಶ್ರೀ ರಮಾನಂದ ಗುರೂಜಿಗಳು ತಿಳಿಸಿದ್ದಾರೆ.












