ವಿಕಲಚೇತನರ ರಾಷ್ಟ್ರ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ 6 ವಿಭಾಗಗಳಲ್ಲಿ ಮತ್ತು ಸಂಸ್ಥೆಗಳಿoದ 9 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿ ವೆಬ್‌ಸೈಟ್ www.award.gov.in ನಲ್ಲಿ ಆನ್‌ಲೈನ್ ಮೂಲಕ ನಾಮ ನಿರ್ದೇಶನ / ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಸಂಕೀರ್ಣ, ಮಣಿಪಾಲ ದೂ.ಸಂ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ