ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ಉಡುಪಿ: ರಾಷ್ಟ್ರದ ಕೈಮಗ್ಗದ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರ ‘ಸ್ಥಳೀಯ ದಿಂದ ಜಾಗತಿಕ’ ಎಂಬ ಕರೆಯಂತೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಯವರ ನೇತೃತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನೂತನ ಸಚಿವ ವಿ.ಸುನೀಲ್ ಕುಮಾರ್ ಪಕ್ಷದ ಹಿರಿಯ ಕಾರ್ಯಕರ್ತೆ ಹಾಗೂ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿರುವ 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜೀವ ನಗರದ ನಳಿನಿ ರಾವ್ ಅವರಿಗೆ ಕೈಮಗ್ಗದ ಸೀರೆಯನ್ನು ಉಡುಗೊರೆ ನೀಡಿ ಸನ್ಮಾನಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಕೋಶಾಧಿಕಾರಿ ಮಾಯಾ ಕಾಮತ್, ಕಾರ್ಯದರ್ಶಿ ನೀರಜಾ ಶೆಟ್ಟಿ, ಅಶ್ವಿನಿ ಶೆಟ್ಟಿ, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಮಹಿಳಾ ಮೋರ್ಚಾ ಉಡುಪಿ ನಗರ ಉಪಾಧ್ಯಕ್ಷೆ ಸರೋಜಾ ಶೆಣೈ, ಪ್ರಧಾನ ಕಾರ್ಯದರ್ಶಿಗಳಾದ ಸುಜಾಲಾ ಸತೀಶ್, ಸುಧಾ ಪೈ ಹಾಗೂ ಮಹಿಳಾ ಮೋರ್ಚಾ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.