ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರೈತರು ನೀಡಿರುವ ಭಾರತ್ ಬಂದ್‍ಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಕಾಂಗ್ರೆಸ್, ಜೆಡಿಎಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷ, ಜಾರ್ಖಂಡ್ ಮುಕ್ತಿ ಮೋರ್ಚಾ,ರೈತರ ಹೋರಾಟಕ್ಕೆ, ಜೆಡಿಎಸ್, ಎನ್ಸಿಪಿ, ಶಿವಸೇನೆ, ಆಮ್ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್),ಭಾರತೀಯ ರಾಷ್ಟ್ರೀಯ ಲೋಕ ದಳ, ಬಿಎಸ್ ಪಿ ಹಾಗೂ ಎಡ ಪಕ್ಷಗಳು ಬೆಂಬಲ ಸೂಚಿಸಿವೆ.
ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಬಂದ್ ನಲ್ಲಿ ಭಾಗಿಯಾಗಿವೆ. ಕರ್ನಾಟದ್ಲಲೂ ಭಾರತ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗೆ ದೆಹಲಿ, ಹರ್ಯಾಣ, ಪಂಜಾಬ್, ತಮಿಳುನಾಡು ರಾಜ್ಯಗಳಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುವ ಸಾಧ್ಯತೆಯಿದೆ. ಹಲವೆಡೆ ಈಗಾಗಲೇ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಎಂದಿನಂತಿದೆ. ಜನರ ಓಡಾಟ ವಿರಳವಾಗಿದೆ.
ಕರಾವಳಿಗೆ ತಟ್ಟದ ಬಂದ್ ಬಿಸಿ:
ಕರಾವಳಿ ಜಿಲ್ಲೆಗಳಿಗೆ ಬಂದ್ ಬಿಸಿ ತಟ್ಟಿಲ್ಲ. ಬಸ್ ಗಳ ಸಂಚಾರ ಎಂದಿನಂತಿದ್ದು, ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು ತೆರೆದಿದೆ. ಜನರ ಓಡಾಟವು ಸಹಜವಾಗಿದೆ.












