ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಚಂಡೀಘಡ್: ಇತ್ತೀಚೆಗಷ್ಟೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನವಜೋತ್ ಸಿಂಗ್ ಸಿಧು ದಿಢೀರ್ ರಾಜಕೀಯ ಬೆಳವಣಿಗೆಯಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನವಜೋತ್ ಸಿಂಗ್ ಸಿಧುರನ್ನ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರ ವಿಚಾರವಾಗಿ ಮಾಜಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್​ಗೆ ಅಸಮಾಧಾನವಿತ್ತು. ನಂತರ ಬೆಳವಣಿಗೆಯಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಕಾಂಗ್ರೆಸ್ ಹೈಕಮಾಂಡ್ ಚರಣ್​ಜಿತ್ ಸಿಂಗ್ ಚನ್ನಿಯವರನ್ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿತು. ಈ ಬೆನ್ನಲ್ಲೇ ಇದೀಗ ಪಂಜಾಬ್ ಸರ್ಕಾರದ ಸಚಿವ ಸಂಪುಟ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಇನ್ನೊಂದೆಡೆ ಅಮರೀಂದರ್ ಸಿಂಗ್ ದೆಹಲಿ ನಾಯಕರನ್ನ ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ. ಈ ಮಧ್ಯೆಯೇ ನವಜೋತ್ ಸಿಂಗ್ ಸಿಧು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಬಹಳಷ್ಟು ಅಚ್ಚರಿಗೆ ಕಾರಣವಾಗಿದೆ.