ನಾವುಂದ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ನಾವುಂದ: ರಸ್ತೆ ದಾಟುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಎದುರು ಸಂಭವಿಸಿದೆ.
ಮೃತನನ್ನು ಮರವಂತೆ ನಿವಾಸಿ ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕಿಶನ್ ಖಾರ್ವಿ (17) ಎಂದು ಗುರುತಿಸಲಾಗಿದೆ. ಕಾಲೇಜು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಿಶನ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಿಶನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಗಂಗೊಳ್ಳಿ ಆಪತ್ಭಾಂದವ ಆಂಬುಲೆನ್ಸ್ ಮೂಲಕ ಶವವನ್ನು ಬೈಂದೂರು ಶವಾಗಾರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ನಾಯಕ್, ಎಸ್ ಐ ಸಂಗೀತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.