ಪ್ರತಿಷ್ಠಿತ ಡೈಮಂಡ್ ಲೀಗ್ ಕೂಟದಲ್ಲಿ ಬೆಳ್ಳಿ ಬಾಚಿದ ನೀರಜ್ ಚೋಪ್ರಾ: ಒಂದೇ ತಿಂಗಳಲ್ಲಿ ಎರಡು ಬಾರಿ ದಾಖಲೆ ಮುರಿದ ಚಿನ್ನದ ಛೋರ

ನವದೆಹಲಿ: ನಿನ್ನೆ ಸ್ಟಾಕ್‌ಹೋಮ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಕೂಟದಲ್ಲಿ ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ತಮ್ಮದೇ ರಾಷ್ಟ್ರೀಯ ದಾಖಲೆಯನ್ನು ಮುರಿದು ತಮ್ಮ ಮೊದಲ ಡೈಮಂಡ್ ಲೀಗ್ ಪದಕವನ್ನು ಪಡೆದರು.

ಸ್ಟಾಕ್‌ಹೋಮ್ ಡೈಮಂಡ್ ಲೀಗ್‌ನಲ್ಲಿ ಚೋಪ್ರಾ 89.94 ಮೀಟರ್‌ಗಳ ಬೃಹತ್ ಎಸೆತದೊಂದಿಗೆ 2 ನೇ ಸ್ಥಾನ ಪಡೆದರು. ಹಾಲಿ ವಿಶ್ವ ಚಾಂಪಿಯನ್ ಆ್ಯಂಡರ್ಸನ್ ಪೀಟರ್ಸ್ 90.31 ಮೀಟರ್ ಎಸೆದು ಚಿನ್ನದ ಪದಕ ಗೆದ್ದರು. ಈ ತಿಂಗಳ ಆರಂಭದಲ್ಲಿ ತುರ್ಕುದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ 89.30 ಮೀ ಎಸೆತದ ತಮ್ಮದೇ ರಾಷ್ಟ್ರೀಯ ದಾಖಲೆಯನ್ನು ಚೋಪ್ರಾ ಮುರಿದರು.

ಸ್ವೀಡಿಷ್ ರಾಜಧಾನಿಯಲ್ಲಿ ನಡೆದ ಪ್ರತಿಷ್ಠಿತ ಏಕದಿನ ಕೂಟವು ಮುಂದಿನ ತಿಂಗಳು ಯು.ಎಸ್.ಎ ಯ ಯುಜೀನ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ನ ಮೊದಲು ಬರುವ ಅತಿದೊಡ್ಡ ಕಾರ್ಯಕ್ರಮವಾಗಿದೆ. ನೀರಜ್ ಚೋಪ್ರಾ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ.